Latest

*ನಂದಿನಿ ಹಾಲಿನ ಪ್ಯಾಕೆಟ್‌ನಲ್ಲಿ ಜೇಡ ಪತ್ತೆ*: *ದೂರು ನೀಡಿದ ಡಾ.ಅಬ್ದುಲ್ ಕಲಾಂ ಸಂಬಂಧಿ*

ಅರ್ಧ ಲೀಟರ್​​ನ ನಂದಿನಿ ಹಸುವಿನ ಹಾಲಿನ ಪ್ಯಾಕೆಟ್‌ನಲ್ಲಿ ಸತ್ತ ಜೇಡ ಪತ್ತೆಯಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಮಹಿಳೆಯೊಬ್ಬರು ಕೆಎಂಎಫ್​​ಗೆ ದೂರು ನೀಡಿದ್ದಾರೆ.

ಪಾತ್ರೆಗೆ ಹಾಲು ಸುರಿಯುತ್ತಿದ್ದಾಗ ನಂಡಿನಿ ಹಾಲಿನಲ್ಲಿ ಸತ್ತ ಜೇಡ ಪತ್ತೆಯಾಗಿದೆ ಎಂದು ಮಹಿಳೆ ದೂತ್ರಿದ್ದಾರೆ. ಈ ಘಟನೆ ಹಾಲಿನ ಸಂಸ್ಕರಣಾ ಘಟಕಗಳಲ್ಲಿನ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣದ ಬಗ್ಗೆಯೇ ಆತಂಕ ಮೂಡಿಸಿದೆ.

ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಸಂಬಂಧಿ ನಾಗೂರ್ ರೋಜಾ ಅವರು ಭಾನುವಾರ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ. ಫ್ರಿಡ್ಜ್‌ನಲ್ಲಿಟ್ಟಿದ್ದ ಹಾಲಿನ ಪ್ಯಾಕೆಟ್ ತೆರೆದು, ಕುದಿಸಲು ಪಾತ್ರೆಗೆ ಹಾಲು ಸುರಿಯುತ್ತಿದ್ದಾಗ ಅದರೊಂದಿಗೆ ಸಣ್ಣ ಸತ್ತ ಜೇಡವೊಂದು ಪತ್ತೆಯಾಗಿದೆ. ಇದನ್ನು ಕಂಡು ಆಘಾತವಾಯಿತು ಎಂದು ಅವರು ಹೇಳಿದ್ದಾರೆ.

ಕಳೆದ ಸುಮಾರು ಎರಡು ದಶಕಗಳಿಂದ ತಮ್ಮ ಕುಟುಂಬ ನಂದಿನಿ ಹಾಲು ಮತ್ತು ಕೆಎಂಎಫ್‌ನ ಇತರ ಉತ್ಪನ್ನಗಳನ್ನು ಖರೀದಿಸುತ್ತಿದೆ. ಸಾಮಾನ್ಯವಾಗಿ ಹಾಲಿನ ಪ್ಯಾಕೆಟ್‌ಗಳನ್ನು ಮಾರಾಟಗಾರರಿಂದ ಮುಚ್ಚಿದ ಬಾಕ್ಸ್‌ನಲ್ಲಿ ಪಡೆಯಲಾಗುತ್ತದೆ. ಬಳಿಕ ನೀರಿನಲ್ಲಿ ತೊಳೆದು ಫ್ರಿಡ್ಜ್‌ನಲ್ಲಿ ಸಂಗ್ರಹಿಸಲಾಗುತ್ತದೆ. ಈ ಬಾರಿಯೂ ಅದೇ ಕ್ರಮ ಅನುಸರಿಸಿದ ನಂತರ ಪ್ಯಾಕೆಟ್ ತೆರೆದಿದ್ದಾಗಿ ಅವರು ತಿಳಿಸಿದ್ದಾರೆ.

Related Articles

Back to top button