Latest

ನರ್ಮದಾ ಕುರ್ತಕೋಟಿ ನಿಧನ

ಪ್ರಗತಿವಾಹಿನಿ ಸುದ್ದಿ, ಧಾರವಾಡ

ಖ್ಯಾತ ಸಾಹಿತಿ ದಿ.ಕೀರ್ತಿನಾಥ ಕುರ್ತಕೋಟಿ ಅವರ ಸೊಸೆ ನರ್ಮದಾ ಕುರ್ತಕೋಟಿ (54) ಸೋಮವಾರ ಮಧ್ಯಾಹ್ನ ನಿಧನರಾದರು.

Home add -Advt

ಅಲ್ಪಕಾಲದ ಅನಾರೋಗ್ಯದಿಂದಾಗಿ ಅವರನ್ನು ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಕುರ್ತಕೋಟಿ ಮೆಮೋರಿಯಲ್ ಟ್ರಸ್ಟ್ ಕಾರ್ಯದರ್ಶಿ,  ದಿಕ್ಕು ಸಾಮಾಜಿಕ ಸಂಸ್ಥೆಯ ಸ್ಥಾಪಕಿಯಾಗಿದ್ದ ಅವರು, ಅಪಾರ ಬಂಧು ಬಳಗ ಅಗಲಿದ್ದಾರೆ.

ಮಂಗಳವಾರ ಮಧ್ಯಾಹ್ನ 2 ಗಂಟೆಯಿಂದ 3 ಗಂಟೆಯವರೆಗೆ ದೇಸಾಯಿ ಕಾಲನಿಯ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. 

Related Articles

Back to top button