Latest

*ನಾಲ್ಕು ರೈಲು ನಿಲ್ದಾಣಗಳಿಗೆ ಸಂತಶ್ರೇಷ್ಠರ ಹೆಸರು: ಕೇಂದ್ರಕ್ಕೆ ಶಿಫಾರಸು ಮಾಡಿದ ಎಂ.ಬಿ ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ನಾಲ್ಕು ಪ್ರಮುಖ ರೈಲು ನಿಲ್ದಾಣಗಳಿಗೆ ಸಂತಶ್ರೇಷ್ಠರ ಹೆಸರಿಡುವಂತೆ ಶಿಫಾರಸು ಮಾಡಲಾಗಿದೆ ಎಂದು ಸಚಿವ ಎಂಬಿ ಪಟೀಲ್ ಅವರು ತಿಳಿಸಿದ್ದಾರೆ. 

ಸಚಿವ ಎಂ ಬಿ ಪಾಟೀಲ ಅವರು ಶಿಫಾರಸು ಮಾಡಿದ್ದು ಈ ಸಂಬಂಧವಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಶಿಪ್ಪಾರಸ್ಸು ಮಾಡಿದ್ದಾರೆ.

Home add -Advt

ಈ ಪತ್ರದಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ರೈಲು ನಿಲ್ದಾಣ ಎಂದು, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಬೇಕೆಂದು ಪ್ರಸ್ತಾಪಿಸಿದ್ದಾರೆ.

ಈ ನಾಲ್ಕೂ ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ತಾವು ಸೂಚಿಸಿರುವ ಸಂತರ ಕೊಡುಗೆ ಮೌಲಿಕವಾಗಿದೆ. ಈ ಶಿಫಾರಸನ್ನು ಅಂಗೀಕರಿಸಿ, ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಸಚಿವರು ಕೋರಿದ್ದಾರೆ.

ಸರ್ಕಾರ ಈ ನಾಲ್ಕು ನಿಲ್ದಾಣ ಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

Related Articles

Back to top button