Latest

ಕೆರೆಗೆ ಉರುಳಿದ 28 ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಕೆರೆಗೆ ಉರುಳಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ.

ಎದುರಿನಿಮ್ದ ಬರುತ್ತಿದ್ದ ಬೈಕ್ ಗೆ ಅಪಘಾತವಾಗುವುದನ್ನು ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಬಳಿಕ ಕೆರೆಗೆ ಉರುಳಿ ಬಿದ್ದಿದೆ.

ಬೈಕ್ ಸವಾರನಿಗೆ ಗಂಭೀರಗಾಯಗಳಾಗಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಜೆ 4ಕ್ಕೆ ಪ್ರಧಾನಿ ಮೋದಿ ಭೇಟಿಯಾಗಲಿರುವ ಬೊಮ್ಮಾಯಿ; ವರಿಷ್ಠರ ಭೇಟಿಗೆ ಸಮಯ ನಿಗದಿ

Related Articles

Back to top button