Uncategorized

BREAKING: ನವಜಾತ ಶಿಶುಗಳಿದ್ದ ಐಸಿಯು ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್; ತಪ್ಪಿದ ಭಾರಿ ಅನಾಹುತ

ಪ್ರಗತಿವಾಹಿನಿ ಸುದ್ದಿ; ಹಾಸನ: ನವಜಾತ ಶಿಶುಗಳಿದ್ದ ಐಸಿಯುನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ವಿದ್ಯುತ್ ಅವಘಡ ಸಂಭವಿಸಿದ ಘಟನೆ ಹಾಸನ ಜಿಲ್ಲೆಯ ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದಂತೆ ತಕ್ಷಣ ಆಸ್ಪತ್ರೆಯ ಸಿಬ್ಬಂದಿಗಳು 24 ನವಜಾತ ಶಿಶುಗಳನ್ನು ಬೇರೆಡೆ ಸ್ಥಳಾಂತರಿಸಿ ಚಿಕಿತ್ಸೆ ನೀಡಿದ್ದಾರೆ. ಸಿಬಂದಿಗಳ ಸಮಯ ಪ್ರಜ್ಞೆಯಿಂದ ಕಂದಮ್ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Home add -Advt

ಶಾರ್ಟ್ ಸರ್ಕ್ಯೂಟ್ ನಿಂದಾಗಿ ನವಜಾತಶಿಶುಗಳು ಇದ್ದ ವಾರ್ಡ್ ಸಂಪೂರ್ಣ ಹೊಗೆಯಿಂದ ತುಂಬಿಕೊಂಡಿದೆ. ಹಿಮ್ಸ್ ಆಸ್ಪತ್ರೆಯ ನಿರ್ದೇಶ ಡಾ.ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಧ್ಯ ಯಾವುದೇ ಅನಾಹುತ ಸಂಭವಿಸಿಲ್ಲ, ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ.


Related Articles

Back to top button