Latest

ಪಕ್ಷೇತರ ಶಾಸಕ ನಾಗೇಶ್ ಮತ್ತೆ ಯು ಟರ್ನ್!; ಸರಕಾರಕ್ಕೆ ಬೆಂಬಲ ಘೋಷಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಮತ್ತೆ ಕಾಂಗ್ರೆಸ್-ಜೆಡಿಎಸ್ ಸರ್ಕಾರಕ್ಕೆ ಬೆಂಬಲ ಘೋಷಣೆ ಮಾಡಿದ್ದಾರೆ.

ಕಳೆದ ಜನವರಿ 15ರಂದು ಸರಕಾರಕ್ಕೆ ಬೆಂಬಲ ವಾಪಸ್ ಪಡೆಯುವ ಘೋಷಮೆ ಮಾಡಿದ್ದ ಅವರು,  ಬುಧವಾರ ಸಂಜೆ ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಪಕ್ಷೇತರ ಶಾಸಕರಾದ ನಾಗೇಶ ಮತ್ತು ಶಂಕರ ಇಬ್ಬರೂ ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆಯುವುದಾಗಿ ಘೋಷಿಸಿದ್ದರು. ಈ ಕುರಿತ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದರು. ಇಬ್ಬರೂ ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ನಾಗೇಶ ಯು ಟರ್ನ್ ಆಗಿದ್ದಾರೆ. 

Home add -Advt

ಜನವರಿ 15ರಂದು ಮಾಧ್ಯಮಗಳ ಜೊತೆ ಮಾತನಾಡಿದ್ದ ಎಚ್.ನಾಗೇಶ್ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುತ್ತೇನೆ ಎಂದು ಹೇಳಿದ್ದರು. 

 

Related Articles

Back to top button