Latest

ಪೌರಕಾರ್ಮಿಕರ ವಸತಿಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ

 

     ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮಹಾನಗರ ಪಾಲಿಕೆಯ ವತಿಯಿಂದ ಗೃಹಭಾಗ್ಯ ಯೋಜನೆಯಡಿ ಪೌರಕಾರ್ಮಿಕರಿಗೆ ಜಿ+3 ಮಾದರಿಯ ವಸತಿಗೃಹಗಳ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.

ಅಜಂ ನಗರ ರಸ್ತೆಯಲ್ಲಿರಯವ ಪಿ.ಕೆ.ಕ್ವಾರ್ಟರ್ಸ್ ಕಾಲನಿಯಲ್ಲಿ ಜಿ+3 ಮಾದರಿಯ ವಸತಿಗೃಹಗಳ ನಿರ್ಮಾಣಕ್ಕೆ ಚಾಲನೆ ನೀಡಿದರು.

ಗೃಹಭಾಗ್ಯ ಯೋಜನೆಯಡಿ ಕೈಗೊಳ್ಳಲಾಗಿರುವ ವಸತಿಗೃಹ ನಿರ್ಮಾಣ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Home add -Advt

ಇದಕ್ಕೂ ಮುಂಚೆ ಪೌರಕಾರ್ಮಿಕರ ಕಾಲನಿಯಲ್ಲಿ ಒಂದು ಸುತ್ತು ಹಾಕಿದ ಸಚಿವ ಜಾರಕಿಹೊಳಿ ಅವರು, ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು ಪೌರಕಾರ್ಮಿಕರು ಹಾಗೂ ಲಭ್ಯವಿರುವ ವಸತಿಗೃಹಗಳ ಬಗ್ಗೆ ಪಾಲಿಕೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಮಹಾಪೌರರಾದ ಬಸಪ್ಪ ಚಿಕ್ಕಲದಿನ್ನಿ ಅವರು ಭೂಮಿಪೂಜೆ ನೆರವೇರಿಸಿದರು. ಪಾಲಿಕೆ ಸದಸ್ಯರಾದ ಸರಳಾ ಹೇರೇಕರ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಶಿಧರ್ ಕುರೇರ್ ಮತ್ತಿತರರು ಉಪಸ್ಥಿತರಿದ್ದರು.

Related Articles

Back to top button