ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಕುಮಾರಸ್ವಾಮಿ
ಪ್ರಗತಿವಾಹಿನಿ ಸುದ್ದಿ: ಈ ಬಗ್ಗೆ ರಾತ್ರಿಯೇ ದೇವೇಗೌಡರ ಬಳಿ ಚರ್ಚೆ ಮಾಡಿದ್ದೇನೆ. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ತೀರ್ಮಾನ ಆಗಬೇಕಿತ್ತು. ಆದರೆ ಇಂದೆ ಉಚ್ಚಾಟನೆ ಆಗಿದೆ. ಈ ನೆಲದ ಕಾನೂನಿನಲ್ಲಿ ತಪ್ಪು ಆಗಿದ್ದರೆ ಶಿಕ್ಷೆ ಆಗಬೇಕು ಎಂದು ಪ್ರಜ್ವಲ್ ರೇವಣ್ಣ ಉಚ್ಚಾಟನೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ದೇವೇಗೌಡರನ್ನು ನನ್ನನ್ನು ಯಾಕೆ ತರ್ತೀರಾ. ಈಗಾಗಲೇ ನಾವು ಬೇರೆ ಆಗಿದ್ದೇವೆ. ನಮ್ಮ ವ್ಯವಹಾರ ಅವರ ವ್ಯವಹಾರ ಬೇರೆ ಬೇರೆ ನಡೆಯುತ್ತೆ. ಬಿಜೆಪಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ರಾಜ್ಯದ ಹೆಣ್ಣು ಮಕ್ಕಳ ಧ್ವನಿಯಾಗಿ ನಾನು ಧ್ವನಿ ಎತ್ತುತ್ತೇನೆ. ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ಆಗಿದ್ರೆ ಈ ನೆಲದ ಕಾನೂನು ಪ್ರಕಾರ ಶಿಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ನನ್ನ ಸ್ಟಾಂಡ್ ಮುಂದುವರೆದಿದೆ. ಕಾನೂನು ಉಲ್ಲಂಘನೆ ಆಗಿದ್ರೆ, ಬಲವಂತ ಆಗಿದ್ರೆ ಕಾನೂನು ರೀತಿಯ ಕ್ರಮ ಆಗಲಿ ಎಂದು ತಿಳಿಸಿದರು.
ಪ್ರಿಯಾಂಕ್ ಖರ್ಗೆ ಟ್ವಿಟ್ ವಿಚಾರವಾಗಿ ಮತನಾಡಿದ ಅವರು, ಪ್ರಧಾನಿಗಳಿಗೂ ಈ ವಿಚಾರಕ್ಕೂ ಸಂಬಂಧ ಇಲ್ಲ. ಮೋದಿ, ಬಿಜೆಪಿ, ದೇವೇಗೌಡರಿಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. 2012 ರ ಪ್ರಕರಣ ಅಂದ ಮೇಲೆ ಇಷ್ಟು ವರ್ಷ ಏನ್ ಮಾಡುತ್ತಿದ್ದರು. ನನ್ನ ಹಾಗೂ ನನ್ನ ತಂದೆಯರ ವಿರುದ್ಧ ಯಾರು ಸಂಶಯ ಪಡಬೇಡಿ ಎಂದು ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ