ಹುಟ್ಟುಹಬ್ಬದ ದಿನದಂದು ಅಭಿಮಾನಿಗಳು ಮನೆ ಬಳಿ ಬರಬೇಡಿ ಎಂದ ಪುನೀತ್ ರಾಜ್ ಕುಮಾರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾರ್ಚ್ 17ರಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಆದರೆ ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಿದ ಹಿನ್ನಲೆಯಲ್ಲಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

ಅಲ್ಲದೇ ಈ ಬಗ್ಗೆ ಟ್ವಿಟರ್ ನಲ್ಲಿ ವಿಡಿಯೋ ಮೂಲಕ ಆಭಿಮಾನಿಗಳಲ್ಲಿ ಮನವಿಯನ್ನೂ ಮಾಡಿಕೊಂಡಿರುವ ಪುನೀತ್, ಈ ವರ್ಷ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಅಭಿಮಾನಿಗಳು ಮನೆಯಬಳಿ ಬರಬೇಡಿ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿ ’ಸಮಸ್ತ ಅಭಿಮಾನಿ ದೇವರುಗಳಿಗೆ ನಮಸ್ಕಾರ. ಈ ವರ್ಷ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಯಾರೂ 17 ರಂದು ತಮ್ಮ ತಮ್ಮ ಊರುಗಳಿಂದ ಮನೆಯ ಹತ್ತಿರ ಬರಬೇಡಿ. ನಾನು ಮನೆಯಲ್ಲೂ ಇರುವುದಿಲ್ಲ ಎಂದು ಮನವಿ ಮಾಡಿಕೊಂಡಿದ್ದಾರೆ.

ಯಾಕೆಂದರೆ ಇಡೀ ದೇಶದಲ್ಲಿ ಕೊರೊನಾ ವೈರಸ್ ಸಮಸ್ಯೆ ಇದೆ. ಇದಕ್ಕಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವೆಲ್ಲರೂ ಸೇರಿ ಕೈ ಜೋಡಿಸಬೇಕು. ಪ್ರತಿ ವರ್ಷ ಬೇರೆ ಬೇರೆ ಊರುಗಳಿಂದ ಬಂದು ನಿಮ್ಮ ಪ್ರೀತಿ, ವಿಶ್ವಾಸ ತೋರಿಸುತ್ತಿದ್ರಿ. ಖಂಡಿತವಾಗಿ ನಿಮ್ಮ ಪ್ರೀತಿ ಮತ್ತು ವಿಶ್ವಾಸ ನನ್ನ ಮೇಲೆ ಇರುತ್ತದೆ ಎಂದು ನಾನು ಭಾವಿಸಿದ್ದೇನೆ. ಎಲ್ಲರಿಗೂ ಒಳ್ಳೆಯದಾಗಲಿ, ಹುಷಾರಾಗಿರಿ ಎಂದು ತಿಳಿಸಿದ್ದಾರೆ.

Home add -Advt

Related Articles

Back to top button