Latest

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಬ್ಯಾಂಕ್ ಗಳ ನೌಕರರ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಸೇವಾ ಭದ್ರತೆ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಬ್ಯಾಂಕ್ ಗಳ ಕ್ಷೇಮಾಭಿವೃದ್ಧಿ ಮಹಾಮಂಡಳ ನೇತೃತ್ವದಲ್ಲಿ ನೌಕರರು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಧರ್ಮನಾಥ ಭವನದಿಂದ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಕ್ಕೇರಿ ಹೊಂಡದವರೆಗೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಹಲವು ದಶಕಗಳಿಂದ ಸೇವಾ ಭದ್ರತೆ, ವೇತನ ಶ್ರೇಣಿ, ಪಿಂಚಣಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಸುವಂತೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ತಕ್ಷಣ ಸರ್ಕಾರ ಬೇಡಿಕೆಗಳನ್ನು ಇಡೇರಿಸಬೇಕು. ಇಲ್ಲದಿದ್ದರೆ ಫೆಬ್ರವರಿ ಎರಡನೇ ವಾರದಲ್ಲಿ  ರಾಜ್ಯಾದ್ಯಂತ ಕೆಲಸವನ್ನು ಸ್ಥಗಿತಗೊಳಿಸುವ ಮೂಲಕ ಬೆಂಗಳೂರಿನಲ್ಲಿ  ಮುಷ್ಕರ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Related Articles

Back to top button