ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಫೆ.೨೮ ರಂದು ಬೆಳಗ್ಗೆ ೯.೩೦ ರಿಂದ ಮಧ್ಯಾಹ್ನ ೩.೩೦ ರವರೆಗೆ ನೆಹರೂ ನಗರದ ಪೀಪಲ್-ಟ್ರೀ ಎಜುಕೇಷನ್ ಸೊಸೈಟಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ. ಉತ್ತೀರ್ಣ, ಪಿಯುಸಿ, ಐಟಿಐ, ಡಿಪ್ಲೋಮಾ, ಫಾರ್ಮಸಿ, ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಮೇಳದಲ್ಲಿ ವಿಕಲಚೇತನರಿಗೂ ಉದ್ಯೋಗವಕಾಶದ ಸೌಲಭ್ಯವಿದ್ದು, ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ.
ಆಸಕ್ತ ಅಭ್ಯರ್ಥಿಗಳು ಮಾಹಿತಿಗಳಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ : ೮೯೫೧೯೧೧೫೬೭, ೯೭೪೩೧೬೬೧೭೮ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ