Latest

ಫೆ.9 ರಂದು ಖಾನಾಪುರ ರೈಲು ನಿಲ್ದಾಣದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಖಾನಾಪುರರ ರೈಲು ನಿಲ್ದಾಣದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ರೈಲುಗಾಡಿ ಸಂಖ್ಯೆ ೧೧೦೦೫/೧೧೦೦೬ ದಾದರ-ಪುದುಚೇರಿ-ದಾದರ ಎಕ್ಸ್‌ಪ್ರೆಸ್ (ವಾರದಲ್ಲಿ ಮೂರು ದಿನ) ಖಾನಾಪುರ ರೈಲು ನಿಲ್ದಾಣದಲ್ಲಿ ನಿಲುಗಡೆ ಮತ್ತು ಲೋಂಡಾ ರೈಲು ನಿಲ್ದಾಣದಲ್ಲಿ ಹೊಸ ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮವು ಫೆ.೯ ರಂದು ಬೆಳಗ್ಗೆ ೯-೩೦ ಕ್ಕೆ ಖಾನಾಪುರ ರೈಲ್ವೆ ನಿಲ್ದಾಣದಲ್ಲಿ ಜರುಗಲಿದೆ. ಕೇಂದ್ರ ಕೌಶಲಾಭಿವೃದ್ಧಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕಮಾರ ಹೆಗಡೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 
ಶಾಸಕಿ ಡಾ. ಅಂಜಲಿ ನಿಂಬಾಳಕರ ಅಧ್ಯಕ್ಷತೆ ವಹಿಸುವರು. ಅರಣ್ಯ, ಜೈವಿಕ ಮತ್ತು ಪರಿಸರ ಸಚಿವ ಸತೀಶ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ವಿವೇಕರಾವ ಪಾಟೀಲ, ಅರುಣ ಶಹಾಪೂರ, ಖಾನಾಪುರ ತಾಪಂ ಅಧ್ಯಕ್ಷೆ ನಂದಾ ಕೊಡಚವಾಡಕರ ಉಪಸ್ಥಿತರಿರುವರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button