Kannada NewsKarnataka NewsLatest

*ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದ ವೇಳೆ ದುರಂತ: ಒಂದೇ ಕುಟುಂಬದ ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ.ನಡೆದಿದೆ. ಉಮಾವತಿ(35), ರತ್ನ(24), ಮಹೇಶ್(28) ಮತ್ತು ಶಿವಾನಂದ(24) ಮೃತ ದುರ್ದೈವಿಗಳು.

ಮೃತರು ಒಂದೇ ಕುಟುಂಬದವರು. ಆಂಧ್ರಪ್ರದೇಶದ ಕೋಸಗಿ ತಾಲೂಕಿನ ರಾಜಲಬಂಡ ಅಣೆಕಟ್ಟಿನ ಕೊನೆ ಭಾಗದಲ್ಲಿರುವ ಸಾತುನೂರು ಗ್ರಾಮದ ಬಳಿಯ ತುಂಗಭದ್ರಾ ನದಿಗೆ ಮಧ್ಯಾಹ್ನ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ನದಿ ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿದ್ದಾರೆ.

ಮೃತರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ಕೋಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button