Latest

ನಟಿ ರಾಗಿಣಿ ದ್ವಿವೇದಿ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಡ್ರಗ್ಸ್ ಜಾಲದ ಜತೆ ನಂಟು ಆರೋಪ ಹಿನ್ನಲೆಯಲ್ಲಿ ಮೂರು ದಿನಗಳ ಹಿಂದೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದಿತ್ತು. ಇಂದು ಸಿಸಿಬಿ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ನಟಿ ರಾಗಿಣಿಯವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.

ಈ ವೇಳೆ ಸಿಸಿಬಿ ಪರ ವಕೀಲರು, ನಟಿ ರಾಗಿಣಿ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅವರನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸುವ ಅಗತ್ಯವಿದ್ದು, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸುವಂತೆ ಕೋರ್ಟ್ ಗೆ ಮನವಿ ಮಾಡಿದ್ದಾರೆ. ಸಿಸಿಬಿ ಮನವಿಗೆ 1ನೇ ಎಸಿಎಂಎಂ ನ್ಯಾಯಾಲಯ 10 ದಿನಗಳ ಬದಲಾಗಿ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.

ಈ ವೇಳೆ ರಾಗಿಣಿ ಪರ ವಕೀಲರು, ರಾಗಿಣಿ ಓರ್ವ ಖ್ಯಾತ ನಟಿ ಎಂಬ ಕಾರಣಕ್ಕಾಗಿ ಆಕೆಯೆ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ಪ್ರಕರಣದಲ್ಲಿ ಸಿಕ್ಕಿಸುವ ಕೆಲಸ ಮಾಡಲಾಗುತ್ತಿದೆ. ಸಿಸಿಬಿ ವಶದಲ್ಲಿರುವ ರಾಗಿಣಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಆದರೆ ನ್ಯಾಯಾಲಯ ರಾಗಿಣಿಯವರನ್ನು ಸಿಸಿಬಿ ಕಸ್ಟಡಿಗೆ ವಹಿಸಿ ಆದೇಶ ನೀಡಲಾಗಿದೆ.

Home add -Advt

Related Articles

Back to top button