ಪ್ರಗತಿವಾಹಿನಿ ಸುದ್ದಿ, ಖಾನಾಪುರ:
ತಾಲ್ಲೂಕಿನ ಕಣಕುಂಬಿ ಬಳಿಯ ಅಬಕಾರಿ ತನಿಖಾ ಠಾಣೆಯಲ್ಲಿ ಗುರುವಾರ ಗೋವಾದಿಂದ ಬೆಳಗಾವಿಯತ್ತ ಹೊರಟಿದ್ದ ವಾಯುವ್ಯ ಸಾರಿಗೆ ಬಸ್ಸಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗೋವಾ ಮದ್ಯವನ್ನು ತನಿಖಾ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ.
ಕಣಕುಂಬಿ ತನಿಖಾ ಠಾಣೆಯಲ್ಲಿ ಬಸ್ ತಪಾಸಣೆ ವೇಳೆ ಬಸ್ಸಿನ ಚೀಲವೊಂದರಲ್ಲಿ ಇರಿಸಿದ್ದ 750 ಮಿ.ಲೀ ಸಾಮಥ್ರ್ಯದ 9 ಬಾಟಲ್ ಬುಲೆಟ್ ಫೆನ್ನಿ ಮತ್ತು 1 ಬಾಟಲ್ ಹನಿ ಬೀ ವಿಸ್ಕೀ ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ
ಆರೋಪದಡಿ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಖಾನಾಪುರ ಅಬಕಾರಿ ಠಾಣೆಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ