ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಲಂಡನ್ ಮತ್ತು ಬೇರೆ ಬೇರೆ ಕಡೆ ನೂರಾರು ಕೋಟಿ ರೂ. ಅಕ್ರಮ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಉದ್ಯಮಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ಗುರುವಾರವೂ ಮುಂದುವರಿಸಲಿದೆ.
ಬುಧವಾರ ಸುಮಾರು 5 ಗಂಟೆಗೂ ಹೆಚ್ಚು ಕಾಲ ವಾದ್ರಾ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದರು. 2005-2010 ರ ಅವಧಿಯಲ್ಲಿ ಸುಮಾರು 9ಕ್ಕೂ ಹೆಚ್ಚು ಮನೆಗಳನ್ನು ವಾದ್ರಾ ಖರೀದಿಸಿದ್ದು, ಅವುಗಳಲ್ಲಿ ಎರಡು ಐಷಾರಾಮಿ ವಿಲ್ಲಾ ಬೆಲೆಯೇ 83 ಕೋಟಿ ರೂ.ನಷ್ಟಾಗುತ್ತದೆ ಎನ್ನಲಾಗಿದೆ.
ಈ ಮಧ್ಯೆ, ‘ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಮನೆಗಳನ್ನು ಕಿಕ್ ಬ್ಯಾಕ್ ಮೂಲಕ ವಾದ್ರಾ ಪಡೆದಿದ್ದಾರೆ’ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಈ ಮಧ್ಯೆ ಜಾರಿನಿರ್ದೇಶನಾಲಯ ಕಚೇರಿಗೆ ವಾದ್ರಾ ಅವರನ್ನು ಪತ್ನಿ ಪ್ರಿಯಾಂಕ ಕಾರಿನಲ್ಲಿ ಬಿಟ್ಟು, ನಿಮ್ಮೊಂದಿಗೆ ನಾವಿದ್ದೇವೆ ಎನ್ನುವ ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ನ ಎಲ್ಲ ನಾಯಕರೂ ವಾದ್ರಾ ಅವರ ಬೆನ್ನಿಗೆ ನಿಂತಿದ್ದು, ಚುನಾವಣೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಕಾಂಗ್ರೆಸ್ ನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ ಶೇರ್ ಮಾಡಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ