ಪ್ರಗತಿವಾಹಿನಿ ಸುದ್ದಿ, ಬಾದಾಮಿ
ವಿಶ್ವಖ್ಯಾತ ಬಾದಾಮಿಯ ಗುಹೆಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪ್ರವಾಸಿಗರಿಗೆ ಒದಗಿಸಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಹಾಜರಿದ್ದರು.