Kannada NewsKarnataka NewsLatest

*ಕಾಲೇಜು ಕ್ಯಾಂಪಸ್ ನಲ್ಲಿಯೇ ಹೃದಯಾಘಾತ: ಕಾಲೇಜು ವಿದ್ಯಾರ್ಥಿ ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಲೇಜು ವಿದ್ಯಾರ್ಥಿಯೋರ್ವ ಕಾಲೇಜು ಕ್ಯಾಂಪಸ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರಿನ ಮರಿಯಪ್ಪ ಪಿಯು ಕಾಲೇಜಿನಲ್ಲಿ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿ ಎಂದಿನಂತೆ ಕಾಲೇಜಿಗೆ ಬಂದಿದ್ದ. ಇದ್ದಕ್ಕಿದ್ದಂತೆ ಎದೆನೋವಿನಿಂದ ಕುಸಿದು ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಾದೇಶ್ ಮೃತ ವಿದ್ಯಾರ್ಥಿ.

ಕುಸಿದು ಬಿದ್ದಿದ್ದ ಮಾದೇಶ್ ನನ್ನು ಕಾಲೇಜು ಸಿಬ್ಬಂದಿಗಳು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟರಲ್ಲಾಗಲೇ ಆತನ ಕೊನೆಯುಸಿರೆಳೆದಿದ್ದ. ಮೃತ ಮಾದೇಶ್ ಮಂಡ್ಯ ಜಿಲೆಯ ಮದ್ದೂರು ತಾಲೂಕಿನ ನಿವಾಸಿ. ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button