
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಗೆ ವಾಪಸ್ ಆಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಯತ್ನಾಳ್ ಭೇಟಿ ಹಾಗೂ ಚರ್ಚೆ ಇಂತದ್ದೊಂದು ಹೇಳಿಕೆಗೆ ಮತ್ತಷ್ಟು ಬಲ ನೀಡಿದಂತಾಗಿದೆ.
ಈ ಮಧ್ಯೆ ಯತ್ನಾಳ್ ಬಿಜೆಪಿಗೆ ಮರಳುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಬಿಜೆಪಿಗೆ ವಾಪಸ್ ಬರಲು ಸಿದ್ದ, ಆದರೆ, ಅದಕ್ಕೆ ನನ್ನ ಎರಡು ಷರತ್ತುಗಳಿವೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಮುಖಾಮುಖಿಯಾಗಿದ್ದರು. ಇಬ್ಬರು ನಾಯಕರು ಸುಮಾರು ಮೂವತ್ತು ನಿಮಿಷಗಳ ಕಾಲ ಮಾತುಕತೆಯನ್ನು ನಡೆಸಿದ್ದರು. ಇದಾದ ನಂತರದ ಬೆಳವಣಿಗೆಯಲ್ಲಿ ದೆಹಲಿಯಲ್ಲಿ ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ಯತ್ನಾಳ್, ಭಾಗಿಯಾಗಿದ್ದರು. ಈಗ, ವಿಜಯೇಂದ್ರ ಈ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
“ಬಿಜೆಪಿಗೆ ವಾಪಸ್ ಬರಲು ಬಸನಗೌಡ ಪಾಟೀಲ್ ಯತ್ನಾಳ್ ಎರಡು ಷರತ್ತು ಹಾಕಿದ್ದಾರೆ. ಒಂದು, ವಿಜಯೇಂದ್ರ ಅವರು ರಾಜ್ಯದ ಅಧ್ಯಕ್ಷ ಸ್ಥಾನದಿಂದ ಇಳಿಯಬೇಕು. ಇನ್ನೊಂದು, ಹತ್ತು ವರ್ಷಗಳ ಕಾಲ ಅವರು ಮುಖ್ಯಮಂತ್ರಿ ಆಗಲ್ಲ ಎಂದು ಬರೆದುಕೊಡಬೇಕೆಂದು ಹೇಳಿದ್ದಾರೆ. ಇವರ ಷರತ್ತಿಗೆ ನನ್ನದೇನೂ ತಕರಾರು ಇಲ್ಲ. ನನಗೆ ನನ್ನಲ್ಲೇ ಆತ್ಮವಿಶ್ವಾಸವಿದೆ, ರಾಜ್ಯದ ಸಮಸ್ತ ಕಾರ್ಯಕರ್ತರಿಗೆ ಸಂದೇಶವನ್ನು ಕೊಟ್ಟಿದ್ದಾರೆ” ಎಂದು ವಿಜಯೇಂದ್ರ ಹೇಳಿದ್ದಾರೆ.
ಇವತ್ತು ನಾವು ನೋಡಬೇಕಾಗಿರುವುದು ದೇಶದ ಮತ್ತು ರಾಜ್ಯದ ಹಿತದೃಷ್ಟಿಯಿಂದ, ನಾವೆಲ್ಲರೂ ಒಟ್ಟಾಗಿ ಒಂದಾಗಿ ಹೋಗಬೇಕಿದೆ. ವಿಜಯೇಂದ್ರ ಕೂಡ ನೀವೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು ಎನ್ನುವ ಸಂದೇಶವನ್ನು ಕೊಟ್ಟಿದ್ದಾರೆ. ಹಾಗಾಗಿ, ಬಸನಗೌಡ ಪಾಟೀಲ್ ಯತ್ನಾಳ್ ಅವರ ಷರತ್ತಿಗೆ ಒಪ್ಪಿದ್ದೇನೆ. ಮತ್ತು, ಡೇ ಒನ್’ನಿಂದ ಹಾಗೆಯೇ ನಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.




