ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಿತ್ ಷಾ ಅವರ ಗುರುವಾರದ ಬೆಂಗಳೂರು ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಗುರುವಾರ ಮಧ್ಯಾಹ್ನ 3 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸುವ ಅವರು ದೇವನಹಳ್ಳಿ ಬಳಿ ಅನಂತ ವಿದ್ಯಾನಿಕೇತನದಲ್ಲಿ ಮಧ್ಯಾಹ್ನ 3.45ಕ್ಕೆ ನಡೆಯುವ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶದಲ್ಲಿ ಭಾಗವಹಿಸುವರು.
ಸಂಜೆ 5 ಗಂಟೆಗೆ ಯಲಹಂಕದ ರಾಯಲ್ ಆರ್ಕಿಡ್ ಹೋಟೆಲ್ ನಲ್ಲಿ ಎಂಎಲ್ಎ, ಎಂಎಲ್ ಸಿ , ಎಂಪಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಜೆ 7.15 ಕ್ಕೆ ಲೋಕಸಭಾ ಪ್ರಭಾರಿಗಳು, ಸಂಚಾಲಕರು, ವಿಸ್ತಾರಕರು , ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ವಿಭಾಗ ಸಂಘಟನಾ ಕಾರ್ಯದರ್ಶಿಗಳು, ಕ್ಲಸ್ಟರ್ ಗಳ ಉಸ್ತುವಾರಿಗಳ ಸಭೆಯಲ್ಲಿ ಮಾರ್ಗದರ್ಶನ ಮಾಡುವರು.
ರಾತ್ರಿ 9ಗಂಟೆಗೆ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ ರಾತ್ರಿ ವಾಸ್ತವ್ಯ ಮಾಡಿ ಫೆ.22ರ ಬೆಳಿಗ್ಗೆ ವಾಪಸ್ ತೆರಳುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



