ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಭಾರತೀಯ ಜನತಾಪಾರ್ಟಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ತನ್ನ ಅಭ್ಯರ್ಥಿಯನ್ನು ಈವರೆಗೂ ಅಂತಿಮಗೊಳಿಸಿಲ್ಲ.
ಮಾಜಿ ಸಚಿವ ದಿ.ಅನಂತಕುಮಾರ ಪತ್ನಿ ತೇಜಸ್ವಿನಿ ಅಭ್ಯರ್ಥಿ ಎಂದು ಬಹುತೇಕ ಅಂತಿಮಗೊಳಿಸಲಾಗಿತ್ತು. ಆದರೆ ಅಂತಿಮ ಪಟ್ಟಿಯವರೆಗೂ ಅವರ ಹೆಸರನ್ನು ತಡೆಹಿಡಿಯಲಾಗಿದೆ.
ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ಸುದ್ದಿಯೂ ಹರಡಿತ್ತು.
ಇದೀಗ ಯುವನಾಯಕ ತೇಜಸ್ವಿ ಸೂರ್ಯ ಅವರನ್ನು ಕಣಕ್ಕಿಳಿಸಬೇಕೆಂದು ಪಕ್ಷ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.