Latest

ಬೆಳಗಾವಿಗೆ ಆಗಮಿಸಿದ ಉಪರಾಷ್ಟ್ರಪತಿ: ಸ್ವಾಗತಿಸಿದ ಕೋರೆ, ಸತೀಶ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬುಧವಾರ ಸಂಜೆ ಬೆಳಗಾವಿಗೆ ಆಗಮಿಸಿದ್ದಾರೆ.

Home add -Advt

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಜೆ 7.30ರ ಹೊತ್ತಿಗೆ ವಿಶೇಷ ವಿಮಾನದಲ್ಲಿ ಬಂದಿಳಿದ ವೆಂಕಯ್ಯ ನಾಯ್ಡು ಅವರನ್ನು ರಾಜ್ಯಸಭಾ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ವಾಗತಿಸಿದರು.

ಗುರುವಾರ ನಡೆಯಲಿರುವ ಕೆಎಲ್ಇ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವದಲ್ಲಿ ಉಪರಾಷ್ಟ್ರಪತಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿಯೇ ಅವರು ಬೆಳಗಾವಿಗೆ ಆಗಮಿಸಿದ್ದಾರೆ. 

ಬೆಳಗಾವಿಯ ಪ್ರವಾಸಿಮಂದಿರದಲ್ಲಿ ವೆಂಕಯ್ಯ ನಾಯ್ಡು ವಾಸ್ತವ್ಯ ಮಾಡಿದ್ದಾರೆ. ಗುರುವಾರ ಸಂಜೆ ಬೆಳಗಾವಿಯಿಂದ ಅವರು ವಾಪಸ್ಸಾಗಲಿದ್ದಾರೆ.

ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳು ಸಹ ವಿಮಾನನಿಲ್ದಾಣದಲ್ಲಿ ಹಾಜರಿದ್ದರು. 

ಕಳೆದ ತಿಂಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಘಟಿಕೋತ್ಸವಕ್ಕೆ ವೆಂಕಯ್ಯ ನಾಯ್ಡು ಆಗಮಿಸಬೇಕಿತ್ತು. ಆದರೆ ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ ಪರಿಕರ ನಿಧನದ ಹಿನ್ನೆಲೆಯಲ್ಲಿ ಅಂದು ಅವರ ಭೇಟಿ ರದ್ದಾಗಿತ್ತು. 

 

Related Articles

Back to top button