Latest

ಅತ್ಯಾಚಾರಕ್ಕೊಳಗಾದ ಅಂಧ ಮಹಿಳೆ ಆತ್ಮಹತ್ಯೆ; ಆರೋಪಿ ಬಂಧನ; ವ್ಯಾಪಕ ಜನಾಕ್ರೋಶ

ಪ್ರಗತಿವಾಹಿನಿ ಸುದ್ದಿ, ಹಗರಿಬೊಮ್ಮನಹಳ್ಳಿ: ಎರಡು ದಿನಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿದ್ದ 58 ವರ್ಷದ ಅಂಧ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ವ್ಯಾಪಕ ಜನಾಕ್ರೋಶಕ್ಕೆ ಒಳಗಾಗಿದ್ದು ಆರೋಪಿ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಾಪುರ ತಾಂಡದ ಲೋಕೇಶ ನಾಯ್ಕ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

ಮಹಿಳೆ ಕುಟುಂಬದವರು ಮೇ 30ರಂದು ಮದುವೆ ಸಮಾರಂಭಕ್ಕೆ ಹೋಗಿದ್ದ ಸಂದರ್ಭದಲ್ಲಿ ಲೋಕೇಶ ನಾಯ್ಕ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಲೇ ಘಟನೆಯಿಂದ ನೊಂದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆಗೆ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದ್ದು ಅತ್ಯಾಚಾರ ಎಸಗಿದವನನ್ನು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಿ ಗಲ್ಲು ಶಿಕ್ಷೆ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಘಟನೆ ನಡೆದ ಮೇಲೂ ಅಧಿಕಾರಿಗಳು ಸ್ಥಳಕ್ಕೆ ಬಾರದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸಂತ್ರಸ್ತ ಮಹಿಳೆ ಕುಟುಂಬದವರು ಮತ್ತು ಗ್ರಾಮಸ್ಥರು ತಡವಾಗಿ ಆಗಮಿಸಿದ ಹಗರಿಬೊಮ್ಮನಹಳ್ಳಿ ತಹಸೀಲ್ದಾರರನ್ನು ತರಾಟೆಗೆ ತೆಗೆದುಕೊಂಡರು.

ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

https://pragati.taskdun.com/bjp-leader-shot-dead-in-west-bengal/

https://pragati.taskdun.com/yeshwantpur-train-collides-with-derailed-train-more-than-50-dead-more-than-350-injured/

https://pragati.taskdun.com/power-fluctuation-at-different-places/

 

Related Articles

Back to top button