Latest

*ನನಗೆ ಕ್ಷೇತ್ರ ಇಲ್ಲ ಎನ್ನುತ್ತಿದ್ದ ಈಶ್ವರಪ್ಪಗೆ ಟಿಕೆಟ್ ಇಲ್ಲ; ಅರನ್ನು ನೋಡಿದ್ರೆ ಅಯ್ಯೋ..ಅನಿಸುತ್ತೇ; ಲೇವಡಿ ಮಾಡಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಕಾರವಾರ: ವಿಧಾನಸಭಾ ಚುನಾವಣೆಗೆ ಬಿಜೆಪಿ ಹಿರಿಯ ನಾಯಕರು, ಮಾಜಿ ಸಿಎಂ, ಮಾಜಿ ಡಿಸಿಎಂ ಗಳಿಗೆ ಬಿಜೆಪಿ ಟಿಕೆಟ್ ನೀಡದ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆ.ಎಸ್.ಈಸ್ವರಪ್ಪನವರು ನನ್ನ ಕ್ಷೇತ್ರದ ಬಗ್ಗೆ ವ್ಯಂಗ್ಯವಾಡುತ್ತಿದ್ದರು. ನನಗೆ ಕ್ಷೇತ್ರ ಇಲ್ಲ ಎಂದು ಹೇಳುತ್ತಿದ್ದ ಈಶ್ವರಪ್ಪನವರಿಗೆ ಇಂದು ಟಿಕೆಟ್ ಇಲ್ಲ, ಹೇಗಿದೆ ನೋಡಿ…ಎಂದು ಲೇವಡಿ ಮಾಡಿದರು.

ನನಗೆ 25 ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಆಹ್ವಾನವಿದೆ. ಆದರೆ ಈಶ್ವರಪ್ಪನವರಿಗೆ ಬಿಜೆಪಿಯಲ್ಲಿ ಟಿಕೆಟ್ ನೀಡಿಲ್ಲ. ರಾಜಕೀಯ ನಿವೃತ್ತಿ ಘೋಷಿಸಿದರು. ಮಾಜಿ ಡಿಸಿಎಂ, ಮಾಜಿ ಸಚಿವರಾಗಿದ್ದವರು, ಬಿಜೆಪಿಯ ಹಿರಿಯ ನಾಯಕರಾಗಿರುವ ಈಶ್ವರಪ್ಪನವರಿಗೆ ಪಕ್ಷ ಹೀಗೆ ಮಾಡಬಾರದಿತ್ತು. ಅವರನ್ನು ನೋಡಿದರೆ ಅಯ್ಯೋ…ಎನಿಸುತ್ತಿದೆ ಎಂದರು.

Home add -Advt

ಈಶ್ವರಪ್ಪ ಮಾತ್ರವಲ್ಲ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಯವರನ್ನೂ ನಡೆಸಿಕೊಂಡ ರೀತಿ ಸರಿಯಿಲ್ಲ. ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಡಿಲ್ಲ, ಅವರು ಕಾಂಗ್ರೆಸ್ ಗೆ ಬಂದರೆ ಸ್ವಾಗತ. ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಎಂದು ಹೇಳಿದರು.

ಇದೇ ವೇಳೆ ಇಂದು ಅಥವಾ ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

https://pragati.taskdun.com/n-r-santoshjdsjoin/


Related Articles

Back to top button