ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಇನಾಮ ಬಡಸ ಗ್ರಾಮದ ಹತ್ತಿರ ಇರುವ ಮಹರಕ್ಯೂ ನಾಲಾಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು.
ಕರ್ನಾಟಕ ನೀರಾವರಿ ಇಲಾಖೆಯ ವತಿಯಿಂದ ಸುಮಾರು 60 ಲಕ್ಷ ರೂ. ಗಳ ವೆಚ್ಚದಲ್ಲಿ ನಾಲಾಕ್ಕೆ ಅಡ್ಡಲಾಗಿ ಬ್ಯಾರೇಜ್ (ಬಾಂದಾರ) ಕಂ ಬ್ರಿಡ್ಜ್ ನಿರ್ಮಾಣದ ಕಾಮಗಾರಿಗಳಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಗುದ್ದಲಿ ಪೂಜೆ ನಡೆಸಲಾಯಿತು.
ಇನ್ನೊಂದೆಡೆ, ಹಿರೇಬಾಗೇವಾಡಿಯ ಪ್ರಮುಖ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಸಹ ಚಾಲನೆ ನೀಡಲಾಯಿತು. ಹಿರೇಬಾಗಿವಾಡಿಯಲ್ಲಿ ಬೈಲಹೊಂಗಲ ರಸ್ತೆಗೆ ಸಂಪರ್ಕ ನೀಡುವ ರಸ್ತೆಗೆ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಿ.ಸಿ. ಪಾಟೀಲ, ಸುರೇಶ ಇಟಗಿ ಮಾತನಾಡಿದರು. ಈ ಸಂಧರ್ಭದಲ್ಲಿ ಹಿರೇಬಾಗೇವಾಡಿ ಗ್ರಾಮದ ಹಿರಿಯರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ