ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಶಾಸಕ ಅಭಯ ಪಾಟೀಲ ವಿಶಿಷ್ಟವಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ .
251 ಮತಗಟ್ಟೆಗಳಲ್ಲಿ, ಸುಮಾರು ನಾಲ್ಕು ಸಾವಿರ ಕಾರ್ಯಕರ್ತರು ಇಂದು ಬೆಳಿಗ್ಗೆ ಕ್ಷೇತ್ರದ 58 ಸಾವಿರ ಮನೆಗಳಿಗೂ ತಲುಪಿ ಬಿಜೆಪಿ ಸಾಧನೆಗಳ ಮಾಹಿತಿ ನೀಡುವ ಕರಪತ್ರಗಳನ್ನು ಹಂಚಿದ್ದಾರೆ. ಬೆಳಿಗ್ಗೆ 7 ಘಂಟೆಗೆ ಆರಂಭವಾದ ಪ್ರಚಾರದ ಅಭಿಯಾನ ಬೆಳಿಗ್ಗೆ 11ಘಂಟೆಗೆ ಮುಕ್ತಾಯವಾಗಿದೆ .
ಬಿಜೆಪಿ ಕಾರ್ಯಕರ್ತರು ಬಿಜೆಪಿ ಪರವಾಗಿ ಮತಯಾಚಿಸುವ ಜೊತೆಗೆ ಪ್ರತಿಯೊಬ್ಬ ಮತದಾರ ಮತದಾನ ಮಾಡುವಂತೆ ಜಾಗೃತಿ ಮಾಡಿದ್ದಾರೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಇದೆ. ಈ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗುವುದು ನಿಶ್ಚಿತ ಬೆಳಗಾವಿ ಚಿಕ್ಕೋಡಿ ಸೇರಿದಂತೆ ಮುಂಬೈ ಕರ್ನಾಟಕದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ದೇಶದ ಜನ ನರೇಂದ್ರ ಮೋದಿ ಮತ್ತೊಮ್ಮೆ ಎಂದು ನಿರ್ಧರಿದ್ದಾರೆ. ಚುನಾವಣೆಯ ಫಲಿತಾಂಶದ ದಿನ ಇದು ಸಾಭೀತಾಗುತ್ತದೆ ಎಂದು ಅಭಯ ಪಾಟೀಲ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ .
ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುವುದು ಗ್ಯಾರಂಟಿ ಎಂದು ಅಭಯ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲಾ ಗ್ರುಪ್ ಗಳಿಗೆ ಶೇರ್ ಮಾಡಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ