Politics

*ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವೆಅಗೊಳಿಸಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಕೆ.ಕೆ.ಗೆಸ್ಟ್ ಹೌಸ್ ಬಳಿಯೇ ಕಾರ್ಯಕರ್ತರನ್ನು ತಡೆದಿದ್ದಾರೆ.

ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಗ್ವಾದ ಶುರುವಾಗಿದ್ದು, ಪರಿಸ್ಥಿತಿ ಕೈ ಮೀರುವ ಹಂತ ತಲುಪುತ್ತಿದ್ದಂತೆ ಪೊಲೀಸರು ಹಲವು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದ್ದು, ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.


Related Articles

Back to top button