Kannada NewsLatest

ಬೆಳಗಾವಿ ಹೆಸರನ್ನು ಬೆಳಗಲಿ -ಹುಕ್ಕೇರಿ ಶ್ರೀ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿ ಬೆಳಗಾವಿಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಬೆಳಗಲಿ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಆಶಿಸಿದ್ದಾರೆ.

ಲೋಕಸಭೆಗೆ ಆಯ್ಕೆಯಾಗಿ ಹುಕ್ಕೇರಿ ಹಿರೇಮಠದ ಶಾಖೆಗೆ ಆಗಮಿಸಿದ್ದ ಸಂಸದ ಸುರೇಶ ಅಂಗಡಿ ಅವರಿಗೆ ಆಗಲೇ ಕೇಂದ್ರ ಸಚಿವರಾಗಲೆಂದು ಆಶೀರ್ವಾದ ಮಾಡಿದ್ದೆ. ಸುರೇಶ ಅಂಗಡಿ ಅವರು ಈ ಭಾಗದ ಜನರ ಹಾಗೂ ದೇಶದ ಸಮಸ್ಯೆಯನ್ನು ಬಗೆ ಹರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಿ ಬೆಳಗಾವಿಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಬೆಳಗಿಸಬೇಕು ಎಂದು ಅವರು ಹಾರೈಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button