Latest

ಭಾರತದಲ್ಲಿ ವೇಗವಾಗಿ ಹರಡುತ್ತಿರುವ ಕೊರೊನಾ ಸೋಂಕು; WHO ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕು ಈಗಷ್ಟೇ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಸೋಂಕು ಸ್ಫೋಟಗೊಳ್ಳುವ ಭೀತಿಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದೆ.

ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರ ಪ್ರಕಾರ ಭಾರತದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ 1.30 ಶತಕೋಟಿ ಜನಸಂಖ್ಯೆಯ ಭಾರತದಲ್ಲಿ 2 ಲಕ್ಷ ಸೋಂಕು ಪ್ರಕರಣ ದೊಡ್ಡದೆಂದನಿಸುವುದಿಲ್ಲ. ಆದಾಗ್ಯೂ ಮುಂದಿನ ದಿನಗಳಲ್ಲಿ ಯಾವುದೇ ಸಂದರ್ಭದಲ್ಲಾದರೂ ಸೋಂಕು ಸ್ಫೋಟಗೊಂಡು ತಾರಕಕ್ಕೇರುವ ಸಾಧ್ಯತೆ ಹೆಚ್ಚಿದೆ ಎಂದಿದ್ದಾರೆ.

ಡಬ್ಲ್ಯೂ ಹೆಚ್ ಓ ತಜ್ಞ ಮೈಕೆಲ್ ರಯಾನ್ ಪ್ರಕಾರ, ಪ್ರಸ್ತುತ ಭಾರತದಲ್ಲಿ ಕೊರೊನ ವೈರಸ್ ಪ್ರಕರಣಗಳು ದ್ವಿಗುಣಗೊಳ್ಳಲು ಸುಮಾರು ಮೂರು ವಾರಗಳ ಸಮಯ ಹಿಡಿಯುತ್ತಿದೆ. ಈಗ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿರುವುದರಿಂದ ಸೋಂಕು ಹೆಚ್ಚುವ ಅಪಾಯ ಹೆಚ್ಚಿದೆ. ಭಾರತದಲ್ಲಷ್ಟೇ ಅಲ್ಲ, ದಕ್ಷಿಣ ಏಷ್ಯಾದ ಇತರ ದೇಶಗಳಲ್ಲೂ ಇದೇ ಸ್ಥಿತಿ ಇದೆ. ಆದರೆ, ಸಮುದಾಯದ ಮಟ್ಟದಲ್ಲಿ ಈ ವೈರಾಣು ಬೇರು ಬಿಟ್ಟರೆ ಯಾವುದೇ ಸಂದರ್ಭದಲ್ಲಾದರೂ ಸೋಂಕು ಪಸರುವಿಕೆಯ ವೇಗ ತೀವ್ರಗೊಳ್ಳಬಹುದು ಎಂದು ಎಚ್ಚರಿಸಿದ್ದಾರೆ.

ಡಬ್ಲ್ಯೂಎಚ್​ಒ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಅವರು ಭಾರತದ ನಗರ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಪಾಲಿಸುವುದು ಬಹಳ ಕಷ್ಟ ಸಾಧ್ಯ. ಈ ಹಿನ್ನೆಲೆಯಲ್ಲಿ ಜನರು ಮಾಸ್ಕ್​ನಂಥ ರಕ್ಷಣಾ ಪರಿಕರಗಳನ್ನ ಕಟ್ಟುನಿಟ್ಟಾಗಿ ಬಳಸಬೇಕು. ಕಂಪನಿಗಳು, ಶಿಕ್ಷಣ ಸಂಸ್ಥೆಗಳು ತಮ್ಮ ಉದ್ಯೋಗಿಗಳ ಸುರಕ್ಷತೆಗೆ ಸರಿಯಾದ ವ್ಯವಸ್ಥೆ ಮಾಡಬ್ರ‍್ಕು. ಮಾರುಕಟ್ಟೆ ಪ್ರದೇಶಗಳಲ್ಲಿ ಯಾವ ರೀತಿ ಇರಬೇಕೆಂದು ಜನರಿಗೆ ಅರಿವು ಮೂಡಿಸುವ ಕೆಲಸವಾಗಬೇಕು. ಇಲ್ಲದಿದ್ದರೆ ಕೊರೋನಾ ಸೋಂಕು ನಿಯಂತ್ರಣ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button