Karnataka News

*ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೇ 25ರಿಂದ ಭಾರಿ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೇ 25ರಿಂದ ಅತಿ ಹೆಚ್ಚು ಮಲೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಮೇ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. ಇನ್ನೆರಡು ದಿನಗಳಲ್ಲಿ ಮಳೆ ಮತ್ತಷ್ಟು ಚುರುಕಾಗಲಿದೆ. ಕಲಬುರಗಿ, ಯಾದಗಿರಿ, ಬೀದರ್, ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ,

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ,ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಶಿವಮೊಗ್ಗ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಬೆಳಗಾವಿ,ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button