Kannada NewsKarnataka NewsNational

*ಭೀಕರ ಅಪಘಾತ: ಸ್ಥಳದಲ್ಲೆ 7 ಜನರ ಸಾವು*

ಪ್ರಗತಿವಾಹಿನಿ ಸುದ್ದಿ: ಹರಿಯಾಣದ ಅಂಬಾಲಾ ಬಳಿ ಮಿನಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಘಾತದಲ್ಲಿ 7 ಜನ ಸ್ಥಳದಲ್ಲೇ ಸಾವಿಗಿಡಾಗಿರುವ ಘಟನೆ ನಡೆದಿದೆ.‌ 

ಈ ಅಪಘಾತದಲ್ಲಿ 7 ಜನ ಮೃತಪಟ್ಟರೆ, 25 ಜನರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. 

ಕಳೆದ ವಾರವಷ್ಟೇ, ಹರಿಯಾಣಾದ ನುಹ್ ಪ್ರದೇಶದಲ್ಲಿ ಟೂರಿಸ್ಟ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಒಂಬತ್ತು ಜನರು ಸಜೀವ ದಹನವಾಗಿದ್ದು, 15 ಮಂದಿ ಗಾಯಗೊಂಡಿದ್ದರು. ಕುಂಡ್ಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಸುಮಾರು 2 ಮೀ ದೂರದಲ್ಲಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಸುಮಾರು 60 ಜನರು ಇದ್ದರು, ಎಲ್ಲರೂ ಪಂಜಾಬ್‌ನ ಹೋಶಿಯಾರ್‌ಪುರ ಮತ್ತು ಲುಧಿಯಾನ ನಿವಾಸಿಗಳು. ಇವರೆಲ್ಲರೂ ಮಥುರಾ ಮತ್ತು ವೃಂದಾವನದಿಂದ ಧಾರ್ಮಿಕ ತೀರ್ಥಯಾತ್ರೆಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು. ಸದ್ಯ  ಗಾಯಗೊಂಡವರೆಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.‌

Home add -Advt

ಟೂರಿಸ್ಟ್ ಬಸ್‌ಗೆ ಬೆಂಕಿ ಹತ್ತಿಕೊಂಡು 9 ಜನ ಸಹಜೀವ ಸಹನ ಆಗಿರುವ ಘಟನೆ ಮರೆಮಾಚುವ ಮುನ್ನವೇ ಮತ್ತೆ ಗುರುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿ 7 ಜನ ಸಾವನ್ನಪ್ಪಿದ್ದು, ಆ ರಸ್ತೆಯ ಮೇಲೆ ಪ್ರಯಾಣಿಸುವ ಪ್ರಯಾಣಿಕರಿಗೆ ಭಯದ ವಾತಾವರಣ ಸೃಷ್ಠಿಸಿದೆ. ನಿನ್ನೆ ರಾತ್ರಿ ನಡೆದ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾದ್ಯತೆ ಇದೆ ಎನ್ನಲಾಗಿದೆ.‌

Related Articles

Back to top button