ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಾಖ ಮತ್ತು ಆನಂದ್ ತೆಲ್​ತುಂಬ್ಡೆ ಅರ್ಜಿ ವಜಾ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್ ನವಲಾಖ ಮತ್ತು ಆನಂದ್ ತೆಲ್​ತುಂಬ್ಡೆಗೆ ಶರಣಾಗಲು ಮೂರು ವಾರಗಳ ಕಾಲಾವಕಾಶ ನೀಡಲಾಗಿದೆ.

ಪ್ರಕರಣ ಸಂಬಂಧ ಗೌತಮ್ ನವಲಾಖ ಮತ್ತು ಆನಂದ್ ತೆಲ್​ತುಂಬ್ಡೆ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾ. ಅರುಣ್ ಮಿಶ್ರಾ ಮತ್ತು ನ್ಯಾ. ಎಂ.ಆರ್. ಶಾ ಅವರಿದ್ದ ಸುಪ್ರೀಂ ನ್ಯಾಯಪೀಠ, ಅಕ್ರಮ ಚಟುವಟಿಕೆ ನಿಯಂತ್ರಣ ಕಾಯ್ದೆ ಅಡಿ ಆರೋಪ ದಾಖಲಾಗಿರುವುದರಿಂದ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಅಲ್ಲದೇ ಗೌತಮ್ ನವಲಾಖ ಮತ್ತು ಆನಂದ್ ತೆಲ್ತುಂಬ್ಡೆ ಅವರಿಗೆ ಶರಣಾಗಲು ಮೂರು ವಾರ ಕಾಲಾವಕಾಶವನ್ನೂ ನೀಡಿದೆ.

ನವಲಖ ಮತ್ತು ತೆಲ್ತುಂಬ್ಡೆ ಇಬ್ಬರೂ ಮಾವೋವಾದಿ ಉಗ್ರರೊಂದಿಗೆ ನಂಟಿದೆ ಎನ್ನಲಾಗಿದೆ. 2017, ಡಿಸೆಂಬರ್ 31ರಂದು ಪುಣೆಯಲ್ಲಿ ನಾಕ್ಸಲರು ಆಯೋಜಿಸಿದ್ದರು ಎನ್ನಲಾದ ಎಲ್ಗಾರ್ ಪರಿಷದ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಲಾಗಿತ್ತು. ಮಾರನೇ ದಿನ ಪುಣೆಯ ಕೋರೆಗಾಂವ್ ಭೀಮಾ ಗ್ರಾಮದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದವು. ಈ ಹಿಂಸಾಚಾರಗಳಿಗೂ ನಕ್ಸಲರೇ ಕುಮ್ಮಕ್ಕು ನೀಡಿದ್ದರು ಎನ್ನಲಾಗಿದ್ದು, ಈ ಪ್ರಕರಣ ಸಂಬಂಧ ಗೌತಮ್ ನವಲಾಖ ಮತ್ತು ತೆಲ್ತುಂಬ್ಡೆ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button