Latest

ಡ್ರಗ್ಸ್ ಪ್ರಕರಣ; ನಾಪತ್ತೆಯಾಗಿದ್ದ ಆದಿತ್ಯ ಆಳ್ವ ಕೊನೆಗೂ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಎ6 ಆರೋಪಿ, ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ ಆದಿತ್ಯ ಆಳ್ವನನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ತನ್ನ ಹೆಸರು ಹೊರ ಬರುತ್ತಿದ್ದಂತೆಯೆ ತಲೆಮರೆಸಿಕೊಂಡಿದ್ದ ಆದಿತ್ಯ ಆಳ್ವನನ್ನು ತಡರಾತ್ರಿ ಚೆನ್ನೈನ ರೆಸಾರ್ಟ್ ಒಂದರಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆದಿತ್ಯ ಆಳ್ವ ಡ್ರಗ್ಸ್ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಸಿಸಿಬಿ ಪೊಲೀಸರು ಆಳ್ವ ಅವರ ಬೆಂಗಳೂರು ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಮಾದಕ ವಸ್ತುಗಳು ಪತ್ತೆಯಾಗಿತ್ತು. ಪ್ರಕರಣದ ಬೆನ್ನಲ್ಲೇ ಆದಿತ್ಯ ಆಳ್ವ ತಲೆಮರೆಸಿಕೊಂಡಿದ್ದರು. ಅಂತಿಮವಾಗಿ ಆದಿತ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಆದಿತ್ಯ ಆಳ್ವ ಬಂಧನದ ಬೆನ್ನಲ್ಲೇ ಮತ್ತೆ ಹಲವರಿಗೆ ಸಂಕಷ್ಟ ಎದುರಾಗಲಿದೆ.

Related Articles

Back to top button