Belagavi NewsBelgaum NewsKarnataka NewsPolitics

*ಮಂಡೋಳಿ-ಖಾದರವಾಡಿ ಗ್ರಾಮಗಳಿಗೆ ₹2.50 ಕೋಟಿ ವೆಚ್ಚದಲ್ಲಿ ಸಂಪರ್ಕ ರಸ್ತೆ ನಿರ್ಮಾಣ*

ಮೃಣಾಲ್ ಹೆಬ್ಬಾಳಕರ್ ಅವರಿಂದ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಂಡೋಳಿ ಗ್ರಾಮದಲ್ಲಿ ಸುಮಾರು 2.50 ಕೋಟಿ ರೂ. ವೆಚ್ಚದಲ್ಲಿ ಮಂಡೋಳಿ ಮತ್ತು ಖಾದರವಾಡಿ ಗ್ರಾಮಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.


ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಗ್ರಾಮಸ್ಥರು ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.


ಈ ರಸ್ತೆ ನಿರ್ಮಾಣದಿಂದ ಮಂಡೋಳಿ ಮತ್ತು ಖಾದರವಾಡಿ ಗ್ರಾಮಗಳ ನಡುವಿನ ಸಂಪರ್ಕ ಮತ್ತಷ್ಟು ಸುಗಮವಾಗಲಿದ್ದು, ಎರಡೂ ಗ್ರಾಮಗಳ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವುದಲ್ಲದೆ, ಕೃಷಿ ಉತ್ಪನ್ನಗಳ ಸಾಗಾಟಕ್ಕೂ ನೆರವಾಗಲಿದೆ. ಇದರಿಂದ ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಮೃಣಾಲ್ ಹೆಬ್ಬಾಳಕರ್ ಹೇಳಿದರು.

ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಹಿರಿಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಳು ದೇಸೂರಕರ್, ಮನೋಹರ ಬೆಳಗಾಂವ್ಕರ್ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Back to top button