Karnataka News

*ಹಿಂಡಲಗಾ ಕೇಂದ್ರ ಕಾರಾಗ್ರಹ ಪರಿಶೀಲಿಸಿದ ಗೃಹ ಸಚಿವ ಆರಗ*

 

ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ವೀರ ಸಾವರ್ಕರ್ ಫೋಟೊ ಅನಾವರಣಗೊಳಿಸಿದರು. ಬಳಿಕ ಜೈಲಿನ ಕೈದಿಗಳೊಂದಿಗೆ ಸಂವಾದ ನಡೆಸಿ, ಅವರ ತೊಂದರೆ ತಾಪತ್ರಯಗಳು, ಊಟ, ಮೂಲ ಸೌಕರ್ಯಗಳ ಬಗ್ಗೆ ಚರ್ಚಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಜೈಲಿನಲ್ಲಿ ಕೈದಿಗಳಿಗೆ ಯಾವುದೇ ಮಾದಕ ಪದಾರ್ಥಗಳು ಸಿಗದಂತೆ ಕಟ್ಟು ನಿಟ್ಟಿನ ಕ್ರಮ ವಹಿಸಿದ್ದೇವೆ. ಅಂತಹ ವಿದ್ಯಮಾನಗಳು ನಡೆದರೆ ಸಂಬಂಧಪಟ್ಟ ಜೈಲು ಸಿಬ್ಬಂದಿ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Home add -Advt

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಅಫೀಮು, ಮೊಬೈಲ್ ಪೂರೈಸಿದ್ದ ಆರೋಪದಲ್ಲಿ 30 ಜನರನ್ನು ವರ್ಗಾವಣೆ ಮಾಡಲಾಗಿದೆ. 15 ಜನರನ್ನು ಅಮಾನತ್ ಮಾಡಲಾಗಿದೆ ಎಂದು ತಿಳಿಸಿದರು.

*ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ: ಸರ್ಕಾರ ಘೋಷಣೆ*

Related Articles

Back to top button