ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಮುಂಬರುವ ಲೋಕಸಭಾ ಚುನಾವಣೆಗಾಗಿ ರಾಜ್ಯದ 19,953 ಶಾಲೆಗಳನ್ನು ಮತಗಟ್ಟೆ ನಿರ್ಮಾಣಕ್ಕಾಗಿ ಬಳಸಲಾಗುತ್ತಿದೆ. ಈ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ನಿರ್ಮಾಣಕ್ಕಾಗಿ 34 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.
ಕಂಪೌಂಡ್ ವಾಲ್, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳಿರುವ ಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು, ಬಣ್ಣ, ಫ್ಯಾನ್ ಗಳ ಅಳವಡಿಕೆ ಸೇರಿದಂತೆ ಮೂಲಸೌಲಭ್ಯಗಳ ಸೃಷ್ಟಿಗೆ ಹಣ ಬಳಸಲು ಸೂಚಿಸಲಾಗಿದೆ.
ಈ ಮೊದಲು ಶಾಲೆಗಳ ಮೂಲಸೌಲಭ್ಯಗಳಿಗೆ ಮಹತ್ವ ನೀಡುತ್ತಿರಲಿಲ್ಲ. ಹಣವನ್ನೂ ಬಿಡುಗಡೆ ಮಾಡುತ್ತಿರಲಿಲ್ಲ. ಇದೇ ಮೊದಲ ಬಾರಿಗೆ ವಿಶೇಷ ಅನುದಾನ ಒದಗಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ