ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಲೋಕಸಭಾ ಚುನಾವಣೆ-೨೦೧೯ ರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಲೋಕಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿನ ಮತಗಟ್ಟೆಗಳಲ್ಲಿರುವ ಎಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ತಮ್ಮ ಮತ ಚಲಾಯಿಸುವ ನಿಟ್ಟನಲ್ಲಿ ಜಿಲ್ಲೆಯ ಎಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಮತದಾರರಿಗೆ ಮತಗಟ್ಟೆಗಳಿಗೆ ಬಂದು ಮತ ಹಾಕುವ ಪ್ರಕ್ರಿಯೆಯಲ್ಲಿ ಸ್ವಇಚ್ಛೆಯಿಂದ ಉಚಿತವಾಗಿ ಸಹಕರಿಸಲು ಆಸಕ್ತಿಯುಳ್ಳ ಸ್ವಯಂ-ಸೇವಕರು ತಮ್ಮ ಹೆಸರುಗಳನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿ, ಶಿವಾಜಿ ನಗರ ಬೆಳಗಾವಿ ಇಲ್ಲಿಗೆ ಅಥವಾ ಅಧಿಕಾರಿಗಳಮೋಬೈಲ್ ಸಂಖ್ಯೆ: ೮೦೫೦೬೦೯೦೯೮ನ್ನು ಸಂಪರ್ಕಿಸಿ ಹೆಸರು ನೊಂದಾಯಿಸುವಂತೆ ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.