
ಪ್ರಗತಿವಾಹಿನಿ ಸುದ್ದಿ: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಮರಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ಬಳಿಕ ರಾಗಿಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಕೇರಳ ಮೂಲದ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಗೊಟ್ಟಿಗೆರೆಯ ಟಿ.ಜಾನ್ ಕಾಲೇಜಿನ ವಿದ್ಯಾರ್ಥಿಗಳು. ನಾಲ್ವರು ವಿದ್ಯಾರ್ಥಿಗಳು ಕಾರಿನಲ್ಲಿ ಬನ್ನೇರುಘಟ್ಟ ಅರಣ್ಯಪ್ರದೇಶಕ್ಕೆ ತೆರಳಿ ಮೋಜು ಮಸ್ತಿ ಮಾಡಿ ವಾಪಸ್ ಆಗುತ್ತಿದ್ದರು. ಕಂಠಪೂರ್ತಿ ಕುಡಿದು, ಕಾರು ಚಲಾಯುಸಿತ್ತದ್ದರು. ರಾಗಿಹಳ್ಳಿ ಬಳಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ