ಪ್ರಗತಿ ಮೀಡಿಯಾ ಹೌಸ್, ಬೆಳಗಾವಿ:
ಶನಿವಾರ ಬೆಳಗಾವಿ ಸುತ್ತಮುತ್ತ ಸುರಿದ ಭಾರಿ ಗಾಳಿ, ಮಳೆಗೆ ಅನೇಕ ಕಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಹಲವು ಮನೆಗಳ ಮೇಲ್ಚಾವಣಿ ಹಾರಿಹೋಗಿದ್ದು, ಹಲವರು ನಿರಾಶ್ರಿತರಾಗಿದ್ದಾರೆ.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕುಟ್ಟಲವಾಡಿ ಗ್ರಾಮದಲ್ಲಿ 15ಕ್ಕೂ ಹೆಚ್ಚು ಮನೆಗಳು ಹಾನಿಯಾಗಿದ್ದು, `ಮನೆ ಮಗಳು’ (ಗ್ರಾಮೀಣ ಕ್ಷೇತ್ರದಲ್ಲಿ ಅವರು ತಮ್ಮನ್ನು ಕರೆದುಕೊಳ್ಳುವುದೇ ನಾನು ನಿಮ್ಮ ಮನೆ ಮಗಳು ಎಂದು) ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಭಾನುವಾರ ಅಧಿಕಾರಿಗಳ ಜೊತೆ ಹಾನಿಗೊಳಗಾದ ಮನೆಗಳನ್ನು ವೀಕ್ಷಿಸಿ ಪರಿಹಾರವನ್ನು ನೀಡುವ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಕದಾಯ ನಿರೀಕ್ಷಕ ದಾಪಳೆ, ತಲಾಟಿ ಕಾಂಬಳೆ, ಯುವರಾಜ ಕದಂ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ