ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮಾಜಿ ಸಚಿವ ಮಲ್ಹಾರಿಗೌಡ ಪಾಟೀಲ್ ನಿಧನರಾಗಿದ್ದಾರೆ.
ಅವರಿಗೆ 80 ವರ್ಷ ವಯಸ್ಸಾಗಿತ್ತು. ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಅವರು ನಿಧನರಾದರು.
ಬಂಗಾರಪ್ಪ ಸಂಪುಟದಲ್ಲಿ ನೀರಾವರಿ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು. ನಾಲ್ಕು ಬಾರಿ ಸಂಕೇಶ್ವರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
ಅವರ ಅಂತ್ಯಕ್ರಿಯೆ ಬುಧವಾರ ಸಂಕೇಶ್ವರದಲ್ಲಿ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ