Latest

ಮಾತೆ ಮಹಾದೇವಿ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ(73) ಲಿಂಗೈಕ್ಯರಾಗಿದ್ದಾರೆ.

Home add -Advt

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಸಂಜೆ 4.45ಕ್ಕೆ ನಿಧನರಾದರು. 1946 ಮಾರ್ಚ್ 13ರಂದು ಜನಿಸಿದ್ದ ಅವರು ಕಿರಿಯ ವಯಸ್ಸಿನಲ್ಲೇ ಸನ್ಯಾಸ ಸ್ವೀಕರಿಸಿದ್ದರು. ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವೇಳೆ ಮಾತೆ ಮಹಾದೇವಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು. 

ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಜನಿಸಿದ್ದ ಮಹಾದೇವಿ ಧಾರವಾಡದಲ್ಲಿ ಅಕ್ಕಮಹಾದೇವಿ ಆಶ್ರಮ ಸ್ಥಾಪನೆ ಮಾಡಿದ್ದರು. 1978 ಬೆಂಗಳೂರಿನ ಕುಂಬಳಗೋಡಿನಲ್ಲಿ ಬಸವ ಗಂಗೋತ್ರಿ ಆಶ್ರಮ ನಿರ್ಮಾಣ ಮತ್ತು 1975ರಂದು ಬೆಂಗಳೂರಿನ ರಾಜಾಜಿನಗರದಲ್ಲಿ ಬಸವ ಮಂಟಪ ಸ್ಥಾಪನೆ ಮಾಡಿದ್ದರು. 1980 ಬಸವ ಧರ್ಮ ಪ್ರಚಾರಕ್ಕೆ ಅಮೆರಿಕ ಪ್ರವಾಸ ಕೈಗೊಂಡಿದ್ದರು.

ಅವರ ‘ಹೆಪ್ಪಿಟ್ಟ ಹಾಲು’ಈ ಕೃತಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭ್ಯವಾಗಿತ್ತು. ಶುಕ್ರವಾರ ಕೂಡಲ ಸಂಗಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. 

ಮಾತೆಮಹಾದೇವಿ ಆರೋಗ್ಯ ಸ್ಥಿತಿ ಗಂಭಿರ

Related Articles

Back to top button