Latest

ಮಾಹಿತಿ ಒದಗಿಸದ ಅಧಿಕಾರಿಗಳಿಗೆ ತಲಾ 10 ಸಾವಿರ ರೂ. ದಂಡ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಕೇಳಲಾದ ಮಾಹಿತಿಯನ್ನು ಸಕಾಲದಲ್ಲಿ ಒದಗಿಸದ ಮೂರು ಪ್ರಕರಣಗಳಲ್ಲಿ ಮಾಹಿತಿ ಆಯೋಗದ ಆಯುಕ್ತರು ತಪ್ಪಿತಸ್ಥ ಅಧಿಕಾರಿಗಳಿಗೆ ತಲಾ 10 ಸಾವಿರ ರೂ. ತಂಡ ವಿಧಿಸಿದ್ದಾರೆ ಎಂದು ರಾಮದುರ್ಗದ ಮಾಹಿತಿ ಹಕ್ಕು ಕಾರ್ಯಕರ್ತ ಶ್ರೀನಿವಾಸಗೌಡ ಪಾಟೀಲ ತಿಳಿಸಿದ್ದಾರೆ.

ಎರಡು ವಿಷಯಗಳ ಕುರಿತು ಮಾಹಿತಿ ನೀಡುವಂತೆ ರಾಮದುರ್ಗ ತಾಲೂಕು ಪಂಚಾಯತಿಯ ವ್ಯವಸ್ಥಾಪಕ ಇಂಚಲಮಠ ಅವರಿಗೆ ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದೆ. ಆದರೆ, ಅವರು ಸಕಾಲದಲ್ಲಿ ಮಾಹಿತಿ ಒದಗಿಸದ್ದರಿಂದ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಮೇಲ್ಮನವಿಗೂ ಅವರು ಸ್ಪಂಧಿಸದ್ದರಿಂದ  ಆಯುಕ್ತರು  ಎರಡು ಅರ್ಜಿಗಳಿಗೆ ತಲಾ 10 ಸಾವಿರದಂತೆ ಒಟ್ಟು 20 ಸಾವಿರ ರೂ. ದಂಡ ವಿಧಿಸಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ವಿವರಿಸಿದ್ದಾರೆ.

ಮಾಹಿತಿಯೊಂದನ್ನು ಒದಗಿಸುವಂತೆ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮ ಪಂಚಾಯತಿಯ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲಾಗಿತ್ತು. ಅವರೂ ಸಕಾಲದಲ್ಲಿ ಮಾಹಿತಿ ಒದಗಿಸದ್ದರಿಂದ ಮಾಹಿತಿ ಆಯೋಗದ ಆಯುಕ್ತರು ಪಿಡಿಒ ಶೇಖರ ಹಿರೇಸೋಮಣ್ಣವರ ಅವರಿಗೂ 10 ಸಾವಿರ ರೂ. ದಂಡ ವಿಧಿಸಿದ್ದಾರೆ. ಈ ಅಧಿಕಾರಿಗಳು ದಂಡವನ್ನು ಸಂದಾಯ ಮಾಡಿದ್ದಾರೆ ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button