ಪ್ರಗತಿವಾಹಿನಿ ಸುದ್ದಿ, ಮೂಡಲಗಿ:
ನೂತನ ತಾಲೂಕಾದ ನಂತರ ಪ್ರಥಮ ಬಾರಿ ಮಾ.೯ ರಂದು ಸುಣಧೋಳಿ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುಲು ನಿರ್ಧರಿಸಲಾಗಿದೆ ಎಂದು ತಾಲೂಕು ಕ.ಸಾ.ಪ. ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಹೇಳಿದರು. ಮೂಡಲಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ಪೂರ್ವಭಾವಿ ತಯಾರಿಯ ಅವರು ಮಾಹಿತಿ ನೀಡಿದರು.
ಮಕ್ಕಳ ಸಾಹಿತಿ ಪ್ರೋ.ಸಂಗಮೇಶ ಗುಜಗೊಂಡ ಮಾತನಾಡಿ, ಮೂಡಲಗಿ ತಾಲೂಕಿನ ಪ್ರಪ್ರಥಮ ಸಮ್ಮೇಳನವಾದ್ದರಿಂದ ಗ್ರಾಮದ ಮನೆ-ಮನಗಳಲ್ಲಿ ಕನ್ನಡದ ಜಾತ್ರೆ ನಡೆಯಬೇಕು ಎಂದು ಮನವಿ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮಾತನಾಡಿ, ಕನ್ನಡ ಸೇವೆಗೆ ಗ್ರಾಮಸ್ಥರೊಂದಿಗೆ ಇಲಾಖೆಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಗ್ರಾಮಸ್ಥರ ಪರವಾಗಿ ಪಿ.ಎಸ್. ಪತ್ತಾರ ಮಾತನಾಡಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ ಊರಿನ ಇತಿಹಾಸಕ್ಕೆ ಮತ್ತೊಂದು ಗರಿ ತೊಡಿಸಿದಂತೆ. ಸಮ್ಮೇಳನವನ್ನು ಯಶಸ್ವಿಗೊಳಿಸಲು ದುಡಿಯುವುದಾಗಿ ಹೇಳಿದರು.
ಸಾವಿತ್ರಿ ಕಮಲಾಪೂರೆ, ಕೋಶಾಧ್ಯಕ್ಷ ಮುರಗೇಶ ಗಾಡವಿ, ನಿಕಟಪೂರ್ವ ಅಧ್ಯಕ್ಷ ಬಿ.ಪಿ. ಬಂದಿ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ