ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ವಿಶೇಷಚೇತನ ಮತದಾರರಿಗೆ ಮತದಾನ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮಾ.೯ ರಂದು ಬೆಳಗ್ಗೆ ೧೦ ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕುಮಾರ ಗಂಧರ್ವ ರಂಗ ಮಂದಿರದವರೆಗೆ ರ್‍ಯಾಲಿ ಆಯೋಜಿಸಲಾಗಿದೆ.
ರ್‍ಯಾಲಿ ನಂತರ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ಕುಮಾರ ಗಂಧರ್ವ ರಂಗಮಂದಿರದಲ್ಲಿ ವಿಶೇಷಚೇತನರಿಗೆ ವಿದ್ಯುನ್ಮಾನ ಮತಯಂತ್ರಗಳ ಮುಖಾಂತರ ಮತ ಚಲಾಯಿಸುವ ಕುರಿತು ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ.