ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ್ದರಿಂದ ಹಲವರು ಅಸ್ವಸ್ಥರಾಗಿ ಮಹಿಳೆಯೊಬ್ಬರು ಮೃತರಾದ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ತನಿಖೆಗೆ ಆದೋಶಿಸಿದ್ದಾರೆ.
ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ವಿವರ ಪಡೆದಿರುವ ಸಿಎಂ, ಕೂಡಲೇ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಪ್ರಕರಣದ ಆಗ್ಗೆ ತ್ವರಿತವಾಗಿ ತನಿಖೆ ನಡೆಸಿ ಇಂತಹ ದುಷ್ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ