Latest

ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ  3ನೇ ಸ್ಥಾನ

ಪ್ರಗತಿವಾಹಿನಿ ಸುದ್ದಿ, ಹಳಿಯಾಳ:

ಸ್ಥಳೀಯ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ರಾಮನಗೌಡಾ ಪಾಟೀಲ ಬಿಇ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಶೇ. 86.43 ಅಂಕಗಳನ್ನು ಗಳಿಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ 3ನೇ ರ್ಯಾಂಕ್ ಪಡೆದಿದ್ದಾರೆ.

ಮಾ.18ರಂದು ಬೆಳಗಾವಿಯ ವಿತಾವಿಯಲ್ಲಿ ನಡೆಯಲಿರುವ ಘಟಿಕೋತ್ಸವ ಸಮಾರಂಭದಲ್ಲಿ ಇವರು ಪ್ರಮಾಣ ಪತ್ರ ಪಡೆದುಕೊಳ್ಳಲಿದ್ದಾರೆ.

ಗೋಕಾಕದ ಭೈರನಟ್ಟಿ ಗ್ರಾಮದ ನಿವಾಸಿ ವೃತ್ತಿಯಲ್ಲಿ ರೈತರಾದ ಸದಾಶಿವಗೌಡಾ ಪಾಟೀಲ ಮತ್ತು ಈರವ್ವ ಅವರ ಪುತ್ರನಾದ ರಾಮನಗೌಡ ಪ್ರಸ್ತುತ ಮೈಸೂರಿನ ಅಟೋಮೋಟಿವ್ ಎಕ್ಸೆಲ್ ಕಂಪನಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button