Kannada NewsKarnataka NewsLatestPolitics

*ಬಿಜೆಪಿಯ ಅಡಿಪಾಯವೇ ಡಿಸ್ಟರ್ಬ್ ಆಗಿ ಕುಸಿದು ಹೋಗುತ್ತಿದೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಬಿಜೆಪಿ ಸ್ವಯಂಕೃತ ಅಪರಾಧವೇ ಚುನಾವಣೆ ಸೋಲಿಗೆ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

Home add -Advt

ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಬಿಜೆಪಿಯ ಅಡಿಪಾಯವೇ ಡಿಸ್ಟರ್ಬ್ ಆಗಿ ಕುಸಿದು ಹೋಗುತ್ತಿದೆ. ಇದು ಲೋಕಸಭಾ ಚುನಾವಣೆ ಮೇಲೂ ಪರಿಣಾಮ ಬೀರಲಿದೆ ಎಂದು ಹೇಳಿದರು.

ಕಾಂಗ್ರೆಸ್ ನನಗೆ ಸ್ಥಾನಮಾನ ನೀಡಿದೆ. ಎಂಎಲ್ ಸಿ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಲೋಕಸಭಾ ಚುನಾವಣೆಯಲ್ಲಿಯೂ ತೊಡಗಿಸಿಕೊಳ್ಳುತ್ತೇನೆ. ಸ್ಪರ್ಧೆಗೆ ಹೇಳಿದರೆ ಅದಕ್ಕೂ ಸಿದ್ಧ. ಹೈಕಮಾಂಡ್ ಏನು ಸೂಚನೆ ನೀಡುತ್ತೆ ಹಾಗೆ ಮಾಡುತ್ತೇನೆ. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದರು.

Related Articles

Back to top button