Politics

*ಮೈಕ್ರೋ ಫೈನಾನ್ಸ್ ಮಾಲಿಕರ ಮೇಲೆ ಸಿಎಂ ಸಿದ್ದರಾಮಯ್ಯ ಗರಂ; ನೀವು ನಿಯಮ ಪಾಲಿಸಿದ್ದೀರಾ? ಎಂದು ಪ್ರಶ್ನೆ*

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮಹತ್ವದ ಸಭೆ

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎಸಿಎಸ್ ಅತೀಕ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ, ಗುಪ್ತಚರ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಮುಂದಿಟ್ಟ ಖಾರವಾದ ಪ್ರಶ್ನೆಗಳು…

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ: ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

*ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?

*ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು?

*ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ?

*ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?

*RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?

*ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button