ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್ ( ಮೈಸೂರು ಮಿನರಲ್ ಲಿಮಿಟೆಡ್) ಅಧ್ಯಕ್ಷರಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನ ಶಾಂತಿ ನಗರದಲ್ಲಿರುವ ಮೈಸೂರು ಮಿನರಲ್ಸ್ ಕಚೇರಿಯಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಪೂಜೆ ನೆರವೇರಿಸಿದ ಬಳಿಕ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕರಾದ ಶ್ರೀಮಂತ ಪಾಟೀಲ, ಮಹಾಂತೇಶ ಕೌಜಲಗಿ ಮೊದಲಾದವರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಬೆಳಗಾವಿ ಜಿಲ್ಲೆಯಲ್ಲಿ ಎಲ್ಲ ಕಾಂಗ್ರೆಸ್ ಮುಖಂಡರು ಒಟ್ಟಾಗಿ ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿದ್ದೇವೆ. ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿರುವುದು ಸಹಜ. ಅವೆಲ್ಲವುಗಳನ್ನು ಸರಿಪಡಿಸಿಕೊಂಡು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹೋರಾಡುತ್ತೇವೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ