Latest

ರಾಜ್ಯಾದ್ಯಂತ PU ಕಾಲೇಜುಗಳಿಗೆ ರಜೆ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ರಾಜ್ಯಾದ್ಯಂತ ಫೆ.15ರವರೆಗೆ ಎಲ್ಲಾ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲು ನಿರ್ಧರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿದಂತೆ ಎಲ್ಲಾ ಪಿಯು ಕಾಲೇಜುಗಳಿಗೆ ಫೆಬ್ರವರಿ.15ರವರೆಗೆ ರಜೆ ಮುಂದುವರೆಯಲಿದೆ. ಸೋಮವಾರ ಅಥವಾ ಮಂಗಳವಾರ ಹಿಜಾಬ್ ಕುರಿತ ಹೈಕೋರ್ಟ್ ತೀರ್ಪು ಬರಲಿದ್ದು, ನಂತರ ಪಿಯು ಕಾಲೇಜು ಪುನರಾರಂಭದ ಬಗ್ಗೆ ನಿರ್ಧಾರ ಹೊರಬೀಳಲಿದೆ.
ಗೋಕಾಕ್ ಗೆ ತೆರಳುತ್ತಿದ್ದ ಬಸ್ ಪಲ್ಟಿ; ಚಾಲಕ ಸೇರಿ ಇಬ್ಬರು ದುರ್ಮರಣ

Home add -Advt

Related Articles

Back to top button